ಪೀಠಕ
1
ಯೇಸು ಕ್ರಿಸ್ತನ ಪ್ರಕಟನೆ ಯೋ ಇಗ್ಗಿಸ್ಸಂ ಭವಿಸಬೇಕಾಗಿರುವ ಸಂಗತಿನ ಇನಿ ದಾಸನ ವಥಲನ ಅ ಪ್ರಕಟಣೆನ ಹೊಂದಿದಿಧು ಅಮ್ಕಯೇಥೆ ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
2
ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.
3
ಈ ಪ್ರವಾದನಾ ವಾಕ್ಯಗಳನ್ನು ಓದುವವರೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ. ಆಸ್ಯಸೀಮೆಯ ಖ್ಹಾಥ್ ಸಬೇವಲನ ಯೋಹಾನ್ ಲಿಕ್ಕಿಯೋಥೆ ಕಗಾಥ್ .
4
ಆಸ್ಯಸೀಮೆವನ ಕತ್ ಸಭೆವಲನ ಯೋಹಾನನು ಲಿಕ್ಕನು ಶ್ಹಾಥ್ ಕತ್ಹೋ – ರಹವಲೋ .ರಹವಲೋ ಚಾಥಹುಇರೋಥೆ ವುಜು ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ
5
ಮತ್ತು ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
6
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.
7
ದೆಕ್ಕೋ , ಯೋ ಮೇಘಮ ಅವುಷೆ ಎಲ್ಲರ ಕಣ್ಣುಗಳು ಆತನನ್ನು ನೋಡುವವು; ಆತನನ್ನು ಇರಿದವರು ಸಹ ಅದನ್ನು ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ದುಃಖಿಸುವರು.ಹೌದು, ಹಾಗೆಯೇ ಆಗುವುದು. ಆಮೆನ್.
8
<<ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ>> ಎಂದು ದೇವರಾದ ಕರ್ತನು ಹೇಳುತ್ತಾನೆ.
9
ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.
10
ನಾನು ಕರ್ತನ ದಿನದಲ್ಲಿ ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.
11
ಅದು ಹೀಗೆಂದು ನುಡಿಯಿತು - <<ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು>> ನುಡಿಯಿತು.
12
ನನ್ನ ಸಂಗಡ ಮಾತನಾಡುತ್ತಿದ್ದ ಶಬ್ಧವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು.
13
ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
14
ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,
15
ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
16
ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು
17
ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು – <<ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ, ಸದಾ ಜೀವಿಸುವವನೂ ಆಗಿದ್ದೇನೆ.
18
ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ; ಮೃತ್ಯುವಿನ ಮತ್ತು ಮೃತ್ಯು ಲೋಕದ ಬೀಗದ ಕೈಗಳು ನನ್ನಲ್ಲಿ ಇವೆ.
19
ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.
20
ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. – ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.>>